ಜಗಳೂರು; ಉಚಿತ ನೇತ್ರ ತಪಾಸಣೆ

ಜಗಳೂರು; ಪಟ್ಟಣದಲ್ಲಿ ಪ್ರೇರಣ ಸಮಾಜ ಸೇವಾ ಸಂಸ್ಥೆ ಚರ್ಚ್ ಮತ್ತು ಎಂ.ಆರ್.ಟಿ ಕಣ್ಣಿನ ಆಸ್ಪತ್ರೆ ಕೊಂಡ್ಲಹಳ್ಳಿ , ಹಿರಿಯ ನಾಗರೀಕ ಸಂಘ ಹಾಗೂ ಜಿಲಾ ಅಂಧತ್ವ ನಿಯಂತ್ರಣ ಸಂಸ್ಥೆ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನ ಪ್ರೇರಣ ಸಮಾಜ ಸೇವಾ ಚರ್ಚ್ ಆವರಣದಲ್ಲಿ ಹಮ್ಮಿಕೋಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಜೆಎಂಎಫ್‍ಸಿ ಮತ್ತು ಸಿವಿಲ್ ನ್ಯಾಯಾಧೀಶರು ಮಹೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮನುಷ್ಯನ ದೇಹದಲ್ಲಿ ಮುಖ್ಯವಾದ ಅಂಗ ಕಣ್ಣುಗಳ ರಕ್ಷಣೆ ಮಾಡಬೇಕು. ಇಂತಹ ಶಿಬಿರಗಳನ್ನು ಏರ್ಪಡಿಸುವುದರ ಮೂಲಕ ಸಮಾಜ ಮುಖಿ ಕೆಲಸ ಮಾಡುವುದರಿಂದ ಸಹಕಾರಿಯಾಗಲಿದೆ. ಇಂತಹ ಶಿಬಿರಗಳನ್ನು ಮಾಡುವುದರ ಮೂಲಕ ಅಲ್ಲಿಯ ಜನರಿಗೂ ಅನುಕೂಲವಾಗಲಿದೆ ಎಂದು ಹೇಳಿದರು.ಈ ವೇಳೆ ಜಿಲ್ಲಾ ವೈದ್ಯಧಿಕಾರಿ ಡಾ. ತ್ರಿಪುಲಾಂಬಾ ಅವರು ಶಿಬಿರಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಪ್ರೇರಣ ಸಮಾಜ ಸೇವಾ ಸಂಸ್ಥೆ ಟೈಲರಿಂಗ್ ನಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿದರು.

ಈ ಸಂದರ್ಭದಲ್ಲಿ ನೊಡಲ್ ಅಧಿಕಾರಿ ರೇಣುಕಾರಾಧ್ಯ , ಪ್ರೇರಣ ಸಮಾಜ ಸೇವಾ ಸಂಸ್ಥೆ ನಿರ್ದೇಶಕ ಫಾದರ್ ವಿಲಿಯಂ ಮೀರದ , ನೇತ್ರ ತಜ್ಞರು ಡಾ. ನಾಗರಾಜ್ , ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಡಾ. ಪಿ.ಎಸ್. ಅರವಿಂದ್ , ವಕೀಲರ ಸಂಘದ ಅಧ್ಯಕ್ಷ ಬಸವರಾಜ್ , ಹಿರಿಯ ನಾಗರಿಕ ಸಂಘದ ಕಾರ್ಯದರ್ಶಿ , ಶಿವಣ್ಣ ಶೆಟ್ಟಿ ಸೇರಿದಂತೆ ಇತರರು ಹಾಜರಿದ್ದರು.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *