ಹಂದಿ-ನಾಯಿ-ಬೀಡಾಡಿ ದನಗಳ ಸ್ಥಳಾಂತರಕ್ಕೆ ಮನವಿ

ದಾವಣಗೆರೆ; ನಗರದಲ್ಲಿರುವ ಹಂದಿ, ನಾಯಿಗಳು ಹಾಗೂ ಬೀಡಾಡಿ ದನಗಳನ್ನು ಸ್ಥಳಾಂತರಿಸಬೇಕೆಂದು ಒತ್ತಾಯಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದಾರೆ.ಈ ವೇಳೆ ಮಾತನಾಡಿದ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಜಿ.ಯಲ್ಲಪ್ಪ, ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿ ವರ್ಷಗಳೇ ಕಳೆದಿವೆ. ಆದರೆ ನಗರದಲ್ಲಿ ಎಲ್ಲಂದರಲ್ಲಿ ಹಂದಿಗಳು, ನಾಯಿಗಳು, ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ರಾಜ್ಯದಲ್ಲಿ ಹೆಚ್1ಎನ್1 ರೋಗ ಹರಡುತ್ತಿದೆ.

ಈ ಹಿನ್ನಲೆಯಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕೂಡಲೇ ಹಂದಿಗಳನ್ನು ಸ್ಥಳಾಂತರಿಸಬೇಕೆಂದು ಒತ್ತಾಯಿಸಿದರು. ನಗರದ ಕೆಲ ಭಾಗಗಳಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದೆ. ಸಾರ್ವಜನಿಕರು ರಸ್ತೆಗಳಲ್ಲಿ ಸಂಚರಿಸುವುದೇ ಹರಸಾಹಸವಾಗಿದೆ. ಇನ್ನು ಬೀಡಾಡಿ ದನಗಳ ಹಾವಳಿಯಿಂದಾಗಿ ಅಪಘಾತಗಳಾಗುತ್ತಿದೆ.

ನಗರದ ಸೌಂದರ್ಯ ಹೆಚ್ಚಿಸಿರುವ ಹಳೇ ಪಿಬಿ ರಸ್ತೆಯ ಮಧ್ಯೆದಲ್ಲಿರುವ ಗಿಡಗಳ ಎಲೆಗಳನ್ನು ತಿನ್ನಲು ಬರುವ ದನಗಳು ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟು ಮಾಡುತ್ತಿದೆ. ಇನ್ನು ನಗರದಲ್ಲಿರುವ ಒಳಚರಂಡಿಗಳು ಸಮರ್ಪಕವಾಗಿಲ್ಲದ ಕಾರಣ ಮಳೆ ಬಂದರೆ ಸಾಕು ಚರಂಡಿಗಳೆಲ್ಲಾ ತುಂಬಿ ರಸ್ತೆಗೆ ಹರಿಯುತ್ತಿದೆ. ಇದರಿಂದ ಆರೋಗ್ಯ ಹದಗೆಡುತ್ತಿದೆ. ಕೊಳಚೆ ಪ್ರದೇಶಗಳಲ್ಲದೆ ಪ್ರತಿಷ್ಟಿತ ಬಡಾವಣೆಗಳಲ್ಲೂ ಸಹ ಹಂದಿಗಳ ಹಾವಳಿ ಹೆಚ್ಚಾಗಿವೆ.ಆದ್ದರಿಂದ ನಗರದಲ್ಲಿ ಸಾಂಕ್ರಾಮಿಕ ರೋಗ ಹರಡುವ ಮುನ್ನವೇ ಜಿಲ್ಲಾಡಳಿತ ಎಚ್ಚೆತ್ತು ಹಂದಿ, ನಾಯಿ ಹಾಗೂ ಬೀಡಾಡಿ ದನಗಳನ್ನು ಸ್ಥಳಾಂತರಿಸಬೇಕೆಂದು ಮನವಿ ಮಾಡಿದರು.
ಈ ವೇಳೆ ವೇದಿಕೆಯ ಅಮ್ಜದ್ ಅಲಿ, ಸಂತೋಷ್ ದೊಡ್ಡಮನಿ, ಮಂಜುನಾಥ ಗಂಗೂರು,ದಯಾನಂದ್ ಇದ್ದರು.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *