Home / ಸುದ್ದಿ

ಸುದ್ದಿ

ಗುಣಮಟ್ಟದ ಕಾಮಗಾರಿ ಮಾಡಲು ಗುತ್ತಿಗೆದಾರರಿಗೆ ಸೂಚನೆ

ಹರಿಹರ; ಬಹುದಿನಗಳ ಬಾಳಿಕೆ ಬರುವಂತಹ ವಾಹನ ಸವಾರರಿಗೆ, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕು ಎಂದು ಶಾಸಕ ಎಸ್ ರಾಮಪ್ಪ ಗುತ್ತಿಗೆದಾರರಿಗೆ ತಾಕೀತು ಮಾಡಿದರು. ಲೋಕೋಪಯೋಗಿ ಇಲಾಖೆಯಿಂದ ಹೊಸಪೇಟೆ ಶಿವಮೊಗ್ಗ ರಸ್ತೆಯ ಸುಮಾರು ಕಿಲೋಮೀಟರ್ ವರೆಗೂ ರಸ್ತೆಯ ಮಧ್ಯೆ ಅಕ್ಕಪಕ್ಕದಲ್ಲಿ ದೊಡ್ಡ ದೊಡ್ಡ ಗಾತ್ರದ ಗುಂಡಿಗಳನ್ನು ಬಿದ್ದಿದ್ದು ಅವುಗಳನ್ನು ಡಾಂಬರೀಕರಣದಿಂದ ತೇಪೆ ಮುಚ್ಚುವ ಕಾಮಗಾರಿಗಳನ್ನು ಮಾಡುತ್ತಿದ್ದ ಸಂದರ್ಭದಲ್ಲಿ ಶಾಸಕರು ಪರಿಶೀಲನೆ ಮಾಡಿ ಮಾತನಾಡಿದರು. ಹರಿಹರದಿಂದ ಮಲೇಬೆನ್ನೂರಿಗೆ ಹೋಗುವಷ್ಟರಲ್ಲಿ …

Read More »

ದಾವಣಗೆರೆ ಜಿಲ್ಲೆಗೆ ನಾಳೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ

ದಾವಣಗೆರೆ; ಕೇಂದ್ರ ಸರ್ಕಾರದ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ಅಮಿತಾಬ್ ಗೌತಮ್ ನೇತೃತ್ವದ ಬರ ಅಧ್ಯಯನ ತಂಡ ನಾಳೆ ಮಧ್ಯಾಹ್ನ ದಾವಣಗೆರೆ ಜಿಲ್ಲೆಗೆ ಆಗಮಿಸಲಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತಾಬ್ ಗೌತಮ್, ಬಿ.ಕೆ.ಶ್ರೀವಾಸ್ತವ್, ಎಸ್ ಸಿ ಶರ್ಮ ಸೇರಿದಂತೆ ತಜ್ಞರನ್ನೊಳಗೊಂಡ ತಂಡ ನಾಳೆ ಮಧ್ಯಾಹ್ನ ಹರಪನಹಳ್ಳಿ, ಜಗಳೂರು, ಹರಿಹರ ಹಾಗೂ ದಾವಣಗೆರೆ ತಾಲ್ಲೂಕಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅಧಿಕಾರಿಗಳ ತಂಡ ಕುಡಿಯುವ …

Read More »

ರಾಜ್ಯದ ಬರ ಪರಿಸ್ಥಿತಿ ನಿಭಾಯಿಸಲು ಕೇಂದ್ರದ ನೆರವು ಅಗತ್ಯ

ದಾವಣಗೆರೆ ರಾಜ್ಯದಲ್ಲಿ ಬರಪರಿಸ್ಥಿತಿ ಉಂಟಾಗಿದೆ. ಮಳೆ ಕೊರತೆ ಇದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಹಾನಿಯ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.ನಗರದ ಎಸ್ ಎಸ್ ಕನ್ವೆನ್ಷನ್ ಹಾಲ್ ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಆಯೋಜಿಸಿದ್ದ ರಾಜ್ಯ ಮಟ್ಟದ ಸಮ್ಮೇಳನ ಕಾರ್ಯಕ್ರಮದ ನಿಮಿತ್ತ ದಾವಣಗೆರೆಗಿಂದು ಆಗಮಿಸಿದ ಅವರು, ಇಲ್ಲಿನ ಐಟಿಐ ಕಾಲೇಜು ಮೈದಾನದ ಹೆಲಿಪ್ಯಾಡ್ ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ರಾಜ್ಯದಲ್ಲಿ ನೂರಕ್ಕೂ ಹೆಚ್ಚು …

Read More »

ಸಿಎಂ ಮುಂದೆ ಮನವಿಗಳ ಸುರಿಮಳೆ…….

ದಾವಣಗೆರೆ;ಮಧ್ಯಕರ್ನಾಟಕದ ದಾವಣಗೆರೆಗಿಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗಮಿಸಿದ್ದಾರೆ. ಅವರು ಮುಖ್ಯಮಂತ್ರಿಗಳಾದ ಮೇಲೆ ಪ್ರಥಮ ಬಾರಿಗೆ ಇಂದು ಭೇಟಿ ನೀಡಿದ್ದಾರೆ. ಈ ವೇಳೆ ವಿವಿಧ ಸಂಘಟನೆಗಳು, ರೈತ ಸಂಘಗಳು ಸೇರಿದಂತೆ ಅನೇಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ದಾವಣಗೆರೆಯಲ್ಲಿ ಅಹವಾಲುಗಳ ಸುರಿಮಳೆಯೇ ಸ್ವಾಗತ ಕೋರಿದಂತಾಗಿದೆ. ಪ್ರಮುಖವಾಗಿ ರೈತರ ಸಾಲಮನ್ನಾ, ಖರೀದಿ ಕೇಂದ್ರ ಪ್ರಾರಂಭಕ್ಕೆ ಒತ್ತಾಯಿಸಿ ರೈತರು ತಮ್ಮ ಅಹವಾಲು ಸಲ್ಲಿಸಿದ್ದಾರೆ, ಮೆಕ್ಕೆಜೋಳ,ಭತ್ತ, ಹತ್ತಿ, ಸೂರ್ಯಕಾಂತಿ ಬೆಳೆಗೆ ಬೋನಸ್ ನೀಡಬೇಕು. …

Read More »

ಪತಿಯಿಂದ ವಂಚನೆ-ನ್ಯಾಯಕ್ಕಾಗಿ ಮಹಿಳೆಯ ಮನವಿ

ದಾವಣಗೆರೆ; ಪತಿಯಿಂದ ವಂಚನೆಗೊಳಗಾಗಿ ಇರುವ ಮನೆಯನ್ನು ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದೇನೆ. ನನಗೆ ನ್ಯಾಯ ಬೇಕಿದೆ ಎಂದು ನೊಂದ ಗೃಹಿಣಿ ಸಿ.ಇ.ಪದ್ಮಕ್ಕ ಸುದ್ದಿಗೋಷ್ಟಿಯಲ್ಲಿಂದು ತಮ್ಮ ಅಳಲು ತೋಡಿಕೊಂಡಿದ್ದಾರೆ. 1989 ರ ಮೇ 8 ರಂದು ಹರಿಹರದ ಹರಿಹರೇಶ್ವರ ದೇವಸ್ಥಾನದಲ್ಲಿ ಹಿರಿಯ ಸಮ್ಮುಖದಲ್ಲಿ ನನ್ನ ವಿವಾಹ ಎಂ.ಲಕ್ಷ್ಮಪ್ಪ ಅವರೊಂದಿಗೆ ಜರುಗಿತ್ತು. ಮದುವೆಯ ಸಂದರ್ಭದಲ್ಲಿ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ನಾನು ಕಿರಿಯ ಆರೋಗ್ಯ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದೆ. ನನ್ನ ಪತಿ ಲಕ್ಷ್ಮಪ್ಪ ಅವರು ಪಿಯುಸಿ ಓದುತ್ತಿದ್ದರು …

Read More »

ಚಿಣ್ಣರಿಂದ ಮೌನ ಜಾಗೃತಿ ಜಾಥ

ದಾವಣಗೆರೆ; ಅಂತರ್ಜಾಲ ಸುರಕ್ಷತೆ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ನಗರದಲ್ಲಿಂದು ಮೌನ ಜಾಗೃತಿ ಜಾಥ ಜರುಗಿತು. ವಿನೋಬನಗರದ ಎಸ್ಎಸ್ಎಂಬಿ ಶಾಲೆಯಿಂದ ಆರಂಭಗೊಂಡ ಜಾಥ ಪಿಬಿ ರಸ್ತೆ, ಅರುಣಟಾಕೀಸ್, ಬಿಎಸ್ಎನ್ಎಲ್ ರಸ್ತೆ, ರಾಮಕೃಷ್ಣ ಆಶ್ರಮ ಪೊಲೀಸ್ ಕ್ವಾಟ್ರಸ್ ಹಿಂಭಾಗದಿಂದ ವಿನೋಬನಗರ 1ನೇ ಮೇನ್ ಚೌಡೇಶ್ವರಿ ದೇವಸ್ಥಾನದ ಮಾರ್ಗವಾಗಿ ಎಸ್ಎಸ್ಎಂ ಶಾಲೆಗೆ ಬಂದು ಮುಕ್ತಾಯಗೊಂಡಿತು. ನಂತರ ಮಾತನಾಡಿದ ಡಾನ್ ಬಾಸ್ಕೋ ಸಂಸ್ಥೆಯ ಸಂಯೋಜಕ ಕೊಟ್ರೇಶ್, ಅಂತರ್ಜಾಲದಿಂದ ಮಕ್ಕಳ ಮೇಲಾಗುತ್ತಿರುವ ದುಷ್ಪರಿಣಾಮಗಳಿಂದ ಹೇಗೆ …

Read More »

ನ. 18 ಕ್ಕೆ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದಿಂದ ಬೃಹತ್ ಮೆರವಣಿಗೆ

ದಾವಣಗೆರೆ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ನ.18 ರಂದು ಬೆಳಗ್ಗೆ 10 ಕ್ಕೆ ಶ್ರೀಆದಿಕವಿ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಪ್ರಯುಕ್ತ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಮುಖಂಡ ಹಾಗೂ ಜಿ.ಪಂ ಸದಸ್ಯ ಓಬಳಪ್ಪ ಹೇಳಿದರು. ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು ದಾವಣಗೆರೆ ಜಿಲ್ಲೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಈ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ನ. 18 ರಂದು ಬೆಳಗ್ಗೆ 10 ಗಂಟೆಗೆ ನಗರದ ನಿಟುವಳ್ಳಿ ದುರ್ಗಾಂಬಿಕ ದೇವಸ್ಥಾನದಿಂದ ಪ್ರಾರಂಭಗೊಳ್ಳುವ ಮೆರವಣಿಗೆಗೆ …

Read More »

ಹಸಿರು ಹೆಚ್ಚಿಸುವ ಮೂಲಕ ವಾಯು ಮಾಲಿನ್ಯ ನಿಯಂತ್ರಿಸೋಣ

ದಾವಣಗೆರೆ; ಹಸಿರು ಕಣ್ಣಿಗೆ ಮತ್ತು ವಾತಾವರಣಕ್ಕೆ ತಂಪನ್ನೊದಗಿಸುವ ಮೂಲಕ ಪರಿಸರ ಮಾಲಿನ್ಯ ತಡೆಗಟ್ಟಲು ಸಹಕಾರಿಯಾಗಿದೆ. ಆದ್ದರಿಂದ ಎಲ್ಲರೂ ತಮ್ಮ ಮನೆ, ಕಚೇರಿ ಸುತ್ತಮುತ್ತ ಗಿಡಗಳನ್ನು ನೆಡುವ ಮೂಲಕ ಹಸಿರನ್ನು ಹೆಚ್ಚಿಸಬೇಕೆಂದು ನಿವೃತ್ತ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ದಾವಣಗೆರೆ ಜಿಲ್ಲಾ ಚಾಲನಾ ತರಬೇತಿ ಶಾಲೆಯ ಅಧ್ಯಕ್ಷ ಕೆ.ಪಿ.ನಾಗೇಂದ್ರ ಕರೆ ನೀಡಿದರು. ಜಿಲ್ಲಾಡಳಿತ, ಪ್ರಾದೇಶಿಕ ಸಾರಿಗೆ ಕಚೇರಿ ಇವರ ವತಿಯಿಂದ ಇಂದು ಸಾರಿಗೆ ಪ್ರಾದೇಶಿಕ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಾಯು …

Read More »

ಮಕ್ಕಳ ಕೌಶಲ್ಯಕ್ಕೆ ಪ್ರೋತ್ಸಾಹ ಅಗತ್ಯ

ದಾವಣಗೆರೆ; ಪ್ರತಿಯೊಬ್ಬ ಮಗುವಿನಲ್ಲೂ ತನ್ನದೇ ಆದ ಕೌಶಲ್ಯತೆ ಇರುತ್ತದೆ. ಅದಕ್ಕೆ ಪ್ರೇರಣೆ ನೀಡಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಸಂಯೋಜನಾ ಸಮನ್ವಯಾಧಿಕಾರಿ ಬಿ.ಆರ್.ಬಸವರಾಜಪ್ಪ ಹೇಳಿದರು. ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿಂದು ಜಿಲ್ಲಾ ಪಂಚಾಯಿತಿ, ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮತ್ತು ಕರ್ನಾಟಕ ರಾಜ್ಯಸಾರ್ವಜನಿಕ ಶಿಕ್ಷಣ ಇಲಾಖೆ, ವೃತ್ತಿ ಶಿಕ್ಷಣ ಸಂಘ ಹಾಗೂ ಜಿಲ್ಲಾ ಘಟಕದ ಸಹಯೋಗದೊಂದಿಗೆ ಆಯೋಜಿಸಿದ್ದ ಸರ್ಕಾರಿ ಮತ್ತು …

Read More »

ಹೆಣ್ಣು ಮಕ್ಕಳ ಕ್ಲಬ್ ಸಕ್ರೀಯವಾಗಿ ಕಾರ್ಯನಿರ್ವಹಿಸಲಿ

ದಾವಣಗೆರೆ; ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಓದುವುದು ಹಾಗೂ ಅವರುಗಳ ಗುಣಗಳನ್ನು ಅಳವಡಿಸಿಕೊಂಡಾಗ ಭ್ರಷ್ಟಾಚಾರದ ವಿರುದ್ದ ಖಂಡಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಕೆಂಗಬಾಲಯ್ಯ ಹೇಳಿದರು. ನಗರದ ರಾಜನಹಳ್ಳಿ ಸೀತಮ್ಮ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿಂದು ಏರ್ಪಡಿಸಿದ್ದ ಚೈಲ್ಡ್ ಲೈನ್ ಸೆ ದೋಸ್ತಿ ಹಾಗೂ ಮಕ್ಕಳ ಹಕ್ಕುಗಳ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ಹೆಣ್ಣುಭ್ರೂಣ ಹತ್ಯೆ ಹೆಚ್ಚಾಗಿ ನಡೆಯುತ್ತಿತ್ತು. ಸ್ತ್ರೀಭ್ರೂಣಹತ್ಯೆ ನಿಷೇಧ ಕಾಯ್ದೆ ಜಾರಿ …

Read More »