Home / ಸುದ್ದಿ / ಜಿಲ್ಲೆ

ಜಿಲ್ಲೆ

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು ಲುಂಬಿನಿ ಇನ್ಸ್ ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜಿನಿಂದ ಆಯೋಜಿಸಿದ್ದ 63ನೇ ಕನ್ನಡ ರಾಜ್ಯೋತ್ಸವ, ವಿದ್ಯಾರ್ಥಿ ಪರಿಷದ್ ಉದ್ಘಾಟನೆ ಹಾಗೂ 6ನೇ ವರ್ಷದ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಂಸ್ಥೆಗೆ ಉತ್ತಮವಾದ ಹೆಸರಿದೆ. ನೂತನ ಕೋರ್ಸ್ ಗಳನ್ನು ಆರಂಭಿಸಿದ್ದಾರೆ. ಇದನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆದು …

Read More »

ಕಡತಕ್ಕೆ ಸೀಮಿತವಾದ ಮಹಿಳಾ ಮೀಸಲಾತಿ

ದಾವಣಗೆರೆ;ಲೋಕಸಭೆಯಲ್ಲಿ ಮಹಿಳಾ ಮೀಸಲಾತಿಗೆ ಸಂಬಂಧಿಸಿದಂತೆ ಕಾಯ್ದೆ ಜಾರಿ ವಿಳಂಬವಾಗಿರುವುದು ದುರಂತದ ವಿಷಯ ಎಂದು ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಸ್ವಾತಿ ಮಾಳಗಿ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಎ.ವಿ.ಕಮಲಮ್ಮ ಕಾಲೇಜಿನಲ್ಲಿಂದು ಯುವ ಕಾಂಗ್ರೆಸ್ ವತಿಯಿಂದ ನಡೆದ ಮಹಿಳಾ ಸಬಲೀಕರಣ, ಮಹಿಳಾ ಶಕ್ತಿ ದೇಶದ ಶಕ್ತಿ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತ ಮಹಿಳಾ ಶಕ್ತಿ ದೇಶದ ಶಕ್ತಿ ಎಂಬ ಸಂವಾದವನ್ನು ಮಾಡಿಕೊಂಡು ಬರಲಾಗುತ್ತಿದೆ. ಕರ್ನಾಟಕಕದಲ್ಲಿ ಶೇ 49 ರಷ್ಟು ಮಹಿಳೆಯರಿದ್ದಾರೆ.ಆದರು …

Read More »

ಕರಾಮುವಿ : ವಿಶ್ವವಿದ್ಯಾನಿಲಯದ ಶೈಕ್ಷಣಿಕ ಕಟ್ಟಡಗಳ ಉದ್ಘಾಟನೆ

ದಾವಣಗೆರೆ ; ಡಿ.01 ರಂದು ಬೆಳಿಗ್ಗೆ 11 ಗಂಟೆಗೆ ಘಟಿಕೋತ್ಸವ ಭವನ, ಕರಾಮುವಿ ಕೇಂದ್ರ ಕಚೇರಿ ಆವರಣ, ಮೈಸೂರು ಇಲ್ಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳನ್ನು ವಿಸ್ತರಿಸಲು ಘಟಿಕೋತ್ಸವ ಭವನ, ಶೈಕ್ಷಣ ಕ ಭವನ ಹಾಗೂ ಪ್ರಾದೇಶಿಕ ಕೇಂದ್ರಗಳ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದೆ. ಘನತೆವೆತ್ತ ರಾಜ್ಯಪಾಲರು ಹಾಗೂ ಕರಾಮುವಿ ಯ ಕುಲಾಧಿಪತಿಗಳಾದ ವಜುಭಾಯಿ ರೂಢಾಬಾಯಿ ವಾಲಾ ಇವರು ಘಟಿಕೋತ್ಸವ ಭವನ ಮತ್ತು ಶೈಕ್ಷಣ ಕ ಭವನದ ಉದ್ಘಾಟನೆಯನ್ನು ನೆರವೇರಿಸುವರು. ಉನ್ನತ …

Read More »

ಜನಪದಕ್ಕೆ ಕಲಾಸಕ್ತರ ನಿರುತ್ಸಾಹ-ಅಸಮಾಧಾನ

ದಾವಣಗೆರೆ;ದೃಶ್ಯಮಾಧ್ಯಮಗಳ ಪ್ರಭಾವದಿಂದ ಜನಪದ ಕಲಾಸಕ್ತರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಡಾ.ಲಕ್ಷ್ಮಣ್ ದಾಸ್ ಹೇಳಿದರು.ನಗರದ ಕುವೆಂಪು ಕನ್ನಡ ಭವನದಲ್ಲಿಂದು ಹವ್ಯಾಸಿ ಗ್ರಾಮೀಣ ವಿವಿಧ ಕಲಾವಿದರ ಒಕ್ಕೂಟ ಜಿಲ್ಲಾ ಘಟಕ ಹಾಗೂ ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಯಲಾಟ ಉತ್ಸವ ಮತ್ತು ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಕಲಾವಿದರಿಗೆ ಪ್ರೋತ್ಸಾಹ ನೀಡಿದರು ಸಹ ಪ್ರೇಕ್ಷಕರ ಕೊರತೆ ಎದ್ದು ಕಾಣುತ್ತಿದೆ. ಕಲಾವಿದರಿಗೆ ಪ್ರೋತ್ಸಾಹ …

Read More »

ಮಹಾನ್ ವ್ಯಕ್ತಿಗಳ ಅಗಲಿಕೆ ಕಾಂಗ್ರೆಸ್‍ಗೆ ತುಂಬಲಾರದ ನಷ್ಟ

ದಾವಣಗೆರೆ; ಕೆಳಮಟ್ಟದಿಂದ ಪಕ್ಷವನ್ನು ಕಟ್ಟಿದಂತ ಮಹಾನ್ ವ್ಯಕ್ತಿ ಸಿ.ಕೆ.ಜಾಫರ್ ಶರೀಫ್ ಅವರ ಆದರ್ಶಗಳನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕೆಂದು ಪಾಲಿಕೆ ಸದಸ್ಯ ದಿನೇಶ್ ಕೆ ಶೆಟ್ಟಿ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರ್ಕಾರದ ಮಾಜಿ ಸಚಿವರು, ಕಾಂಗ್ರೆಸ್ ಮುಖಂಡರುಗಳಾದ ಅಂಬರೀಶ್ ಹಾಗೂ ಸಿ.ಕೆ. ಜಾಫರ್ ಷರೀಫ್ ಅವರಿಗೆ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಸಚಿವ, ಬಿಜೆಪಿ ಅನಂತಕುಮಾರ್ ನಿಧನರಾದಾಗ ಕಾಂಗ್ರೆಸ್ ತನ್ನೆಲ್ಲಾ ಕಾರ್ಯಕ್ರಮಗಳನ್ನು ರದ್ದುಮಾಡಿ, ಶ್ರದ್ಧಾಂಜಲಿ …

Read More »

ಮರಳಿಗಾಗಿ ಉಪವಾಸ ಕುಳಿತ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿ ಹೊಡೆತದ ಸವಾಲು ಹಾಕಿದ ಶಾಸಕರು

ದಾವಣಗೆರೆ; ಜನರಿಗೆ ಅತ್ಯಲ್ಪ ದರದಲ್ಲಿ ಮರಳು ನೀಡುವಂತೆ ಒತ್ತಾಯಿಸಿ ಹೊನ್ನಾಳಿಯಲ್ಲಿಂದು ಶಾಸಕ ರೇಣುಕಾಚಾರ್ಯ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಹೊನ್ನಾಳಿಯಲ್ಲಿರುವ ಮರಳು ಯಾರ್ಡ್ ಗಳಿಂದ ಬೆಂಗಳೂರು ಸೇರಿದಂತೆ ಹೊರರಾಜ್ಯಗಳಿಗೆ ಸಾಗಣೆಯಾಗುತ್ತಿದೆ. ಆದರೆ ಜಿಲ್ಲೆಯ ಜನರಿಗೆ ಮರಳು ಸಿಗದಂತೆ ಕೃತಕ ಅಭಾವ ಸೃಷ್ಟಿಸಲಾಗಿದೆ. ಮರಳಿನ ಅಭಾವದಿಂದಾಗಿ ಯಾವುದೇ ಕಟ್ಟಡ ನಿರ್ಮಾಣದ ಕಾಮಗಾರಿಗಳು ನಡೆಯುತ್ತಿಲ್ಲ. ಇದರಿಂದಾಗಿ ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಆದರೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನು ಜಿಲ್ಲಾ …

Read More »

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಸಂಕಲ್ಪ

ದಾವಣಗೆರೆ; ಅಯೋಧ್ಯೆಯಲ್ಲಿ ಶ್ರೀರಾಮಜನ್ಮಭೂಮಿ ಭವ್ಯ ಮಂದಿರ ನಿರ್ಮಾಣಕ್ಕಾಗಿ ಜನಾಗ್ರಹ ಸಭೆಯನ್ನು ಡಿಸೆಂಬರ್ 8 ರಂದು ಸಂಜೆ 4 ಕ್ಕೆ ನಗರದ ಮೋತಿ ವೀರಪ್ಪ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ನ ಪ್ರಾಂತ್ಯ ಕಾರ್ಯದರ್ಶಿ ಬಸವರಾಜಜೀ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿಂದು ಮಾತನಾಡಿದ ಅವರು, 1951 ರಿಂದ ಇಲ್ಲಿಯವರೆಗೂ ನ್ಯಾಯಾಲಯದ ತೀರ್ಪಿಗಾಗಿ ಹಿಂದುಗಳು ನಿರೀಕ್ಷೆ ಮಾಡುತ್ತಿದ್ದೇವೆ. ಆದರೆ ಇದೀಗ ಕಾಯುವ ಸ್ಥಿತಿ ಮುಗಿದಿದ್ದು, ಕೇಂದ್ರ ಸರ್ಕಾರ ಕೂಡಲೇ ಬರುವ ಅಧಿವೇಶನದಲ್ಲಿ …

Read More »

ಭೂಮಿ-ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ಪ್ರತಿಭಟನೆ

ದಾವಣಗೆರೆ;ಜಿಲ್ಲೆಯ ಭೂಮಿ ಮತ್ತು ವಸತಿ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರಿ ಆದೇಶಗಳ ಉನ್ನತ ಮಟ್ಟದದ ಸಮಿತಿ ತೀರ್ಮಾನಗಳ ಜಾರಿಗೆ ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿಂದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಸಾಗುವಳಿ ಮಾಡದೆ ಇರುವ ಸರ್ಕಾರಿ, ಇನಾಮ್, ಖಾರೀಜ್ ಖಾತ, ಗೋಮಾಳ, ಅಮೃತಮಹಲ್ ಕಾವಲ್ ಭೂಮಿಗಳ ಸರ್ವೆ ನಡೆಸಬೇಕು. ಭೂಮಿಹೀನರು ಸಾಗುವಳಿ ಮಾಡುತ್ತಿದ್ದರೆ ಅವರುಗಳಿಗೆ ಆ ಭೂಮಿಯನ್ನು ಮಂಜೂರು ಮಾಡಬೇಕು. ಅರಣ್ಯ- …

Read More »

ಶಬರಿಮಲೈನಲ್ಲಿ ಕೇರಳ ಸರ್ಕಾರದಿಂದ ಹಿಂದುವಿರೋಧಿ ಧೋರಣೆ- ಪ್ರತಿಭಟನೆ

ದಾವಣಗೆರೆ; ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕುರಿತು ಉಂಟಾಗಿರುವ ಬಿಕ್ಕಟ್ಟು ನಿವಾರಿಸಬೇಕೆಂದು ಒತ್ತಾಯಿಸಿ ಅಯ್ಯಪ್ಪಸ್ವಾಮಿ ಕ್ಷೇತ್ರ ರಕ್ಷಣಾ ಸಮಿತಿ ಸದಸ್ಯರು ಜಯದೇವವೃತ್ತದಲ್ಲಿಂದು ಪ್ರತಿಭಟನೆ ನಡೆಸಿ ನಂತರ ಮೆರವಣಿಗೆ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಶಬರಿಮಲೈ ಶ್ರೀಕ್ಷೇತ್ರಕ್ಕೆ ಈವರೆಗೆ ನಿರ್ಬಂಧವಿದ್ದ ಮಹಿಳಾ ಪ್ರವೇಶವನ್ನು ಸರ್ವೋಚ್ಚ ನ್ಯಾಯಾಲಯದ ಆದೇಶದ ಮೂಲಕ ತೆರವುಗೊಳಿಸಲಾಗಿದೆ. ಈ ಕ್ರಮ ಸ್ವಾಗತರ್ಹ. ಆದರೆ 800 ಕ್ಕೂ ಅಧಿಕ ವರ್ಷಗಳಿಂದ ಈ ಕ್ಷೇತ್ರದಲ್ಲಿ 10 ರಿಂದ 50 …

Read More »

ಪೊಲೀಸ್ ಠಾಣೆ ಎದುರೇ ಯುವಕನ ಬರ್ಬರ ಹತ್ಯೆ

ದಾವಣಗೆರೆ;ಹಾಡಹಗಲೇ ಚಾಕುವಿನಿಂದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಡಾವಣೆ ಪೊಲೀಸ್ ಠಾಣೆ ಎದುರಿನಲ್ಲಿರುವ ಹೈಸ್ಕೂಲ್ ಮೈದಾನದಲ್ಲಿ ಇಂದು ಬೆಳಗ್ಗೆ 10 ಗಂಟೆ ವೇಳೆಯಲ್ಲಿ ನಡೆದಿದೆ. ಎಸ್.ಎಂ. ಕೃಷ್ಣನಗರದ ನಿವಾಸಿ ಬಸವರಾಜ್ (24) ಕೊಲೆಯಾದ ಯುವಕ. 2 ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಯುವಕ ಹೊಟ್ಟೆಗೆ ಇರಿಯಲಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮೃತ ಬಸವರಾಜ್ ಐಟಿಐ …

Read More »