Home / ಸುದ್ದಿ / ಜಿಲ್ಲೆ / ಪ್ರಧಾನಿ ಮೋದಿ ಪಾಲ್ಗೊಳ್ಳೋ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯೋದೆಲ್ಲಿ ಗೊತ್ತಾ…!!

ಪ್ರಧಾನಿ ಮೋದಿ ಪಾಲ್ಗೊಳ್ಳೋ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯೋದೆಲ್ಲಿ ಗೊತ್ತಾ…!!

ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ನರೇಂದ್ರ ಮೋದಿ ಪ್ರಧಾನಿ ಆಗುತ್ತಿದ್ದಂತೆ ಜೂನ್ 21 ಅನ್ನು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂತ ಘೋಷಿಸುವ ಜೊತೆಗೆ ಭಾರತದ ಕೀರ್ತಿ ಪತಾಕೆಯನ್ನ ಜಾಗತಿಕ ಮಟ್ಟದಲ್ಲಿ ಹಾರಿಸಿದ್ರು. ಮೋದಿ ಪಾಲ್ಗೊಳ್ಳುವ 2018ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಈಗಾಗಲೇ 4 ಮಹಾನಗರಗಳ ಪರಿಶೀಲನೆ ನಡೆಯುತ್ತಿದೆ.

ಆಯುಷ್ ಮತ್ತು ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಈಗಾಗಲೇ ಮೈಸೂರು, ಹೈದರಾಬಾದ್, ಅಲಹಬಾದ್, ಜೈಪುರ್ ಸಿಟಿಗಳನ್ನ ಆಯ್ಕೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ತಂಡ ನಾಲ್ಕು ಜಿಲ್ಲೆಗಳಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಶ್ವವಿಖ್ಯಾತ ಮೈಸೂರು ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ಮಾಡಲು ಸೂಕ್ತ ಜಾಗ ಎಂದು ಅಧಿಕಾರಿಗಳು ಕೇಂದ್ರದ ಪ್ರಧಾನ ಮಂತ್ರಿ ಕಚೇರಿಗೆ ಪತ್ರ ರವಾನಿಸಿದ್ದಾರೆ. ಮೈಸೂರು ಅರಮನೆ ಮೈದಾನದಲ್ಲಿ ಯೋಗ ಆಯೋಜಿಸುವುದರಿಂದ ಯೋಗದ ಸೌಂದರ್ಯವನ್ನ ಇನ್ನು ಹೆಚ್ಚಿಸಬಹುದು ಎಂಬುದು ಅಧಿಕಾರಿಗಳ ಅಭಿಪ್ರಯವಾಗಿದೆ.

ಪ್ರಧಾನ ಮಂತ್ರಿ ಕಚೇರಿಯಿಂದ ಒಪ್ಪಿಗೆ ಸಿಕ್ಕರೆ ಜೂನ್ 21 ರಂದು ವಿಶ್ವವಿಖ್ಯಾತ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *