ಜನಪದಕ್ಕೆ ಕಲಾಸಕ್ತರ ನಿರುತ್ಸಾಹ-ಅಸಮಾಧಾನ

ದಾವಣಗೆರೆ;ದೃಶ್ಯಮಾಧ್ಯಮಗಳ ಪ್ರಭಾವದಿಂದ ಜನಪದ ಕಲಾಸಕ್ತರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಡಾ.ಲಕ್ಷ್ಮಣ್ ದಾಸ್ ಹೇಳಿದರು.ನಗರದ ಕುವೆಂಪು ಕನ್ನಡ ಭವನದಲ್ಲಿಂದು ಹವ್ಯಾಸಿ ಗ್ರಾಮೀಣ ವಿವಿಧ ಕಲಾವಿದರ ಒಕ್ಕೂಟ ಜಿಲ್ಲಾ ಘಟಕ ಹಾಗೂ ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಯಲಾಟ ಉತ್ಸವ ಮತ್ತು ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,

ಸರ್ಕಾರ ಕಲಾವಿದರಿಗೆ ಪ್ರೋತ್ಸಾಹ ನೀಡಿದರು ಸಹ ಪ್ರೇಕ್ಷಕರ ಕೊರತೆ ಎದ್ದು ಕಾಣುತ್ತಿದೆ. ಕಲಾವಿದರಿಗೆ ಪ್ರೋತ್ಸಾಹ ನೀಡುವುದು ಅತ್ಯವಶ್ಯಕವಾಗಿದೆ. ದೃಶ್ಯ ಮಾಧ್ಯಮಗಳಲ್ಲಿ ರಿಯಾಲಿಟಿ ಶೋಗಳಲ್ಲಿ ಕಲಾವಿದರಿಗೆ ಸಾಕಷ್ಟು ಸಂಭಾವನೆ ಕೊಡುತ್ತದೆ. ಆದರೆ ಹವ್ಯಾಸಿ ಕಲಾವಿದರಿಗೆ ಕಡಿಮೆ ಸಂಭಾವನೆ ದೊರೆಯುತ್ತದೆ.

ಈ ತಾರತಮ್ಯವನ್ನು ಸರ್ಕಾರ ಹೋಗಲಾಡಿಸಬೇಕು. ಜನಪದ ಕಲಾವಿದರು ಬೀದಿಗೆ ಬರುವಂತಹ ಶೋಚನೀಯ ಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಹೃದಯಭಾಗವಾಗಿರುವ ದಾವಣಗೆರೆ ಸಂಸ್ಕೃತಿಯ ನಾಡು. ಕಲಾವಿದರನ್ನು ಪ್ರೋತ್ಸಾಹಿಸುತ್ತಿದೆ. ಗುಬ್ಬಿ ವೀರಣ್ಣ ನಾಟಕ ಕಂಪನಿಗೆ ಜೀವ ಕೊಟ್ಟಂತ ಊರು. ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಕಲಾವಿದರನ್ನು ಪ್ರೋತ್ಸಾಹಿಸಬೇಕು. ಕಲಾವಿದರಿಗೆ ಸಾಕಷ್ಟು ಸಮಸ್ಯೆಗಳಿವೆ. ಎದೆಗುಂದದೆ ಛಲದಿಂದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬೇಕೆಂದು ಹೇಳಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕೆ.ಆರ್.ಜಯಶೀಲಾ ಮಾತನಾಡಿ, ಸಮಾಜದ ಅಂಕುಡೊಂಕುಗಳನ್ನು ತಿದ್ದುವುದು ಕಲೆಯ ಮೂಲಕ. ಹವ್ಯಾಸಿ ಕಲಾವಿದರು ನಿಸ್ವಾರ್ಥ ಸೇವೆಯನ್ನು ಮಾಡುತ್ತಿದ್ದರು, ಕಲಾವಿದರಿಗೆ ಸಾಕಷ್ಟು ಸಮಸ್ಯೆಗಳಿವೆ. ಅವುಗಳನ್ನು ಸರ್ಕಾರ ನಿರ್ವಹಿಸಬೇಕು. ಮಕ್ಕಳಲ್ಲಿ ಆರಂಭದಲ್ಲೇ ಸಾಹಿತ್ಯದ ಬಗ್ಗೆ ಆಸಕ್ತಿ ಬೆಳೆಸಬೇಕೆಂದರು.
ಈ ವೇಳೆ ಎಂ.ಬಸವರಾಜ್ ಅವರಿಗೆ ಕಾಯಕ ಜೀವಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚನ್ನಗಿರಿ ಹಿರೇಮಠದ ಶ್ರೀಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ, ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ್ ಕುರ್ಕಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಕೆ.ಎನ್.ಹನುಮಂತಪ್ಪ, ಬಿ.ಓ.ಜಂಬುನಾಥ್, ಯುವಸಾಹಿತಿ ಎಂ.ಬಸವರಾಜ್, ತೆಲಗಿ ವೀರಭದ್ರಪ್ಪ ಸೇರಿದಂತೆ ಮತ್ತಿತರರಿದ್ದರು.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *