ಜನರಿಗಾಗಿ ಗೊಡ್ಡೆಮ್ಮೆ ರೀತಿ ಕೆಲಸ ಮಾಡಿದ್ದೇನೆ

ದಾವಣಗೆರೆ; ಶಾಸಕ ಶಾಮನೂರು ಶಿವಶಂಕರಪ್ಪ ಅವರು ಹಿರಿಯರು. ಅವರ ಬಗ್ಗೆ ಅಪಾರವಾದ ಗೌರವವಿದೆ. ನಾವು ಅವರಷ್ಟು ಶ್ರೀಮಂತರಲ್ಲ, ಆದರೆ ಇರುವುದರಲ್ಲಿಯೇ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದೇನೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದ್ದಾರೆ.


ತಾಲ್ಲೂಕಿನ ಕಕ್ಕರಗೊಳ್ಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿಂದು ಶ್ರೀಮತಿ ಜಿ.ಎಂ.ಹಾಲಮ್ಮ, ಶ್ರೀ ಜಿ ಮಲ್ಲಿಕಾರ್ಜುನಪ್ಪ ಚಾರಿಟಿ ಫೌಂಡೇಷನ್ ನಿಂದ ಹಮ್ಮಿಕೊಂಡಿದ್ದ ಸ್ಕೂಲ್ ಬ್ಯಾಗ್ ಹಾಗೂ ನೋಟ್ ಬುಕ್ ವಿತರಣಾ ಕಾರ್ಯಕ್ರಮಕ್ಕೂ ಮುನ್ನಾ ವರದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು ನನ್ನನ್ನು ಗೊಡ್ಡೆಮ್ಮೆ ಎಂದಿದ್ದಾರೆ. ಹೌದು ನಾನು 20 ವರ್ಷಗಳ ಕಾಲ ಗೊಡ್ಡೆಮ್ಮೆ ರೀತಿಯಲ್ಲಿಯೇ ಕೆಲಸ ಮಾಡುತ್ತಿದ್ದೇವೆ.

ಜನರು ನಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಆದ್ದರಿಂದ ಜನರ ಕೆಲಸ ಮಾಡುತ್ತಿದ್ದೇನೆ. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ದಿಯ ಕಾರ್ಯ ಮಾಡಿದ್ದೇನೆ. ನಾನು ಸಂಸದನಾಗಿ ಯಾವ ಕೆಲಸ ಮಾಡಿಲ್ಲ ಎಂದು ಹೇಳಿರುವುದು ಸರಿಯಲ್ಲ,ಅವರು ಸಹ ಒಂದು ಬಾರಿ ಸಂಸದರಾಗಿದ್ದರು ಅವರು ಜಿಲ್ಲೆಗೆ ಯಾವ ಕೆಲಸ ಮಾಡಿದ್ದರು ಎಂದು ಹೇಳಲಿ.

ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ದಿಯ ಕಾರ್ಯಗಳ ಕರಪತ್ರ ಬಿಡುಗಡೆ ಮಾಡಿದ್ದೇನೆ. ಅದನ್ನು ಒಮ್ಮೆ ಅವರು ನೋಡಲಿ ಎಂದರು. ರಾಜ್ಯ ಸರ್ಕಾರ ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಬೇಕು. ಸಾಲಮನ್ನಾ ಬಗ್ಗೆ ಈಗಲೂ ಗೊಂದಲಮುಂದುವರೆದಿದೆ. ಸರ್ಕಾರ ಸಾಲಮನ್ನಾ ಬಗ್ಗೆ ಯಾವ ಸುತ್ತೋಲೆಯನ್ನು ಹೊರಡಿಸಿಲ್ಲ, ಇದರಿಂದ ರೈತರು ಕಂಗಾಲಾಗಿದ್ದಾರೆ. 40 ಸಾವಿರ ಕೋಟಿ ಸಾಲಮನ್ನಾ ಮಾಡುತ್ತೇವೆ ಎಂದಿದ್ದಾರೆ. ಕೂಡಲೇ ಸಾಲಮನ್ನಾ ಮಾಡಿ ರೈತರಿಗೆ ನೆರವು ನೀಡಲಿ ಎಂದಿದ್ದಾರೆ.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *