ಮರಳಿಗಾಗಿ ಉಪವಾಸ ಕುಳಿತ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿ ಹೊಡೆತದ ಸವಾಲು ಹಾಕಿದ ಶಾಸಕರು

ದಾವಣಗೆರೆ; ಜನರಿಗೆ ಅತ್ಯಲ್ಪ ದರದಲ್ಲಿ ಮರಳು ನೀಡುವಂತೆ ಒತ್ತಾಯಿಸಿ ಹೊನ್ನಾಳಿಯಲ್ಲಿಂದು ಶಾಸಕ ರೇಣುಕಾಚಾರ್ಯ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಹೊನ್ನಾಳಿಯಲ್ಲಿರುವ ಮರಳು ಯಾರ್ಡ್ ಗಳಿಂದ ಬೆಂಗಳೂರು ಸೇರಿದಂತೆ ಹೊರರಾಜ್ಯಗಳಿಗೆ ಸಾಗಣೆಯಾಗುತ್ತಿದೆ. ಆದರೆ ಜಿಲ್ಲೆಯ ಜನರಿಗೆ ಮರಳು ಸಿಗದಂತೆ ಕೃತಕ ಅಭಾವ ಸೃಷ್ಟಿಸಲಾಗಿದೆ.

ಮರಳಿನ ಅಭಾವದಿಂದಾಗಿ ಯಾವುದೇ ಕಟ್ಟಡ ನಿರ್ಮಾಣದ ಕಾಮಗಾರಿಗಳು ನಡೆಯುತ್ತಿಲ್ಲ. ಇದರಿಂದಾಗಿ ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಆದರೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನು ಜಿಲ್ಲಾ ಉಸ್ತುವಾರಿ ಸಚಿವರು ಇದಕ್ಕೂ ನನಗೂ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ. ಮರಳು ನಮ್ಮ ಹಕ್ಕು, ನಮ್ಮ ಸಂಪತ್ತು ಕೇಳುವ ಅಧಿಕಾರ ಯಾರಿಗೂ ಇಲ್ಲ,

ರಾಜ್ಯ ಸಮ್ಮಿಶ್ರ ಸರ್ಕಾರ ನಿಷ್ಕ್ರೀಯವಾಗಿದೆ. ಅದಕ್ಕಾಗಿ ಅವರಿಗೆ ಹೊನ್ನಾಳಿ ಹೊಡೆತ ತೋರಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸಾಮಾನ್ಯ ಜನರು, ರೈತರೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಒಂದು ಕಡೆ ರೈತರ ಸಾಲಮನ್ನಾ ಮಾಡಿಲ್ಲ, ಭತ್ತ ಹಾಗೂ ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸಿಲ್ಲ, ಇನ್ನು ಜಿಲ್ಲಾ ಉಸ್ತುವಾರಿ ಸಚಿವರು ಒಂದು ಬಾರಿಯ ಅಧಿಕಾರ ಸಭೆ ನಡೆಸಿಲ್ಲ, ಮರಳಿಗಾಗಿ ಸಾರ್ವಜನಿಕರ ಪರವಾಗಿ ಹೋರಾಟ ನಡೆಸಿದರೆ ನಮ್ಮ ಮೇಲೆ ಹಾಗೂ ಅಮಾಯಕರ ಮೇಲೆ ಪ್ರಕರಣ ದಾಖಲಿಸುತ್ತಾರೆ. ಮರಳಿಗಾಗಿ ನಾವು ಯಾವುದೇ ಹೋರಾಟಕ್ಕೂ ಸಿದ್ದರಿದ್ದೇವೆ ಎಂದು ನುಡಿದರು.
ಈ ವೇಳೆ ಹೊನ್ನಾಳಿ ಪ.ಪಂ ಸದಸ್ಯರು, ತಾ.ಪಂ ಹಾಗೂ ಜಿ.ಪಂ ಸದಸ್ಯರು, ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *