ನಕಲಿ ನಾಗಮಣಿ ಮಾರಾಟ-ಐವರ ಬಂಧನ

ದಾವಣಗೆರೆ,ಅ. 30- ನಕಲಿ ನಾಗಮಣಿ ಮಾರಾಟ ಮಾಡುವ ವ್ಯವಸ್ಥಿತ ಜಾಲವೊಂದು ದಾವಣಗೆರೆ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಸಮೀಪದ ಆನಗೋಡು ಬಳಿ ನಕಲಿ ನಾಗಮಣಿ ಮಾರಾಟ ಮಾಡುತ್ತಿದ್ದ ಐವರನ್ನು ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.


ಕರಿಬಸಪ್ಪ, ಕುಮಾರ್, ಸುರೇಶ್ ,ಪ್ರವೀಣ್,ಶಿವಕುಮಾರ್ ಬಂಧಿತ ಆರೋಪಿಗಳು. ನೂರಾರು ಕೋಟಿ ರೂಗಳಿಗೆ ಈ ನಾಗಮಣಿ ಬೆಲೆಬಾಳುತ್ತದೆ ಎಂದು ನಂಬಿಸಿದ್ದ ಆರೋಪಿಗಳು ಆನಗೋಡು ಕರಿಬಸಪ್ಪ ಎಂಬುವರಿಗೆ ಮಾರಾಟ ಮಾಡಿದ್ದಾರೆ. ಅಲ್ಲದೆ 50 ಸಾವಿರ ಮುಂಗಡ ಪಡೆದು 10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಮಾಹಿತಿ ತಿಳಿದ ಗ್ರಾಮಾಂತರ ಠಾಣೆ ಪಿಎಸ್ಐ ಕಿರಣ್ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *