ದಾವಣಗೆರೆ ಜಿಲ್ಲೆಗೆ ನಾಳೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ

ದಾವಣಗೆರೆ; ಕೇಂದ್ರ ಸರ್ಕಾರದ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ಅಮಿತಾಬ್ ಗೌತಮ್ ನೇತೃತ್ವದ ಬರ ಅಧ್ಯಯನ ತಂಡ ನಾಳೆ ಮಧ್ಯಾಹ್ನ ದಾವಣಗೆರೆ ಜಿಲ್ಲೆಗೆ ಆಗಮಿಸಲಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ತಿಳಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತಾಬ್ ಗೌತಮ್, ಬಿ.ಕೆ.ಶ್ರೀವಾಸ್ತವ್, ಎಸ್ ಸಿ ಶರ್ಮ ಸೇರಿದಂತೆ ತಜ್ಞರನ್ನೊಳಗೊಂಡ ತಂಡ ನಾಳೆ ಮಧ್ಯಾಹ್ನ ಹರಪನಹಳ್ಳಿ, ಜಗಳೂರು, ಹರಿಹರ ಹಾಗೂ ದಾವಣಗೆರೆ ತಾಲ್ಲೂಕಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅಧಿಕಾರಿಗಳ ತಂಡ ಕುಡಿಯುವ ನೀರು, ಬೆಳೆಹಾನಿ, ಉದ್ಯೋಗಖಾತ್ರಿ ಕಾಮಗಾರಿ ಪರಿಶೀಲನೆ ನಡೆಸಲಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಬಹಳಷ್ಟು ಬೆಳೆ ಹಾನಿಯಾಗಿದೆ. ಸುಮಾರು 574 ಕೋಟಿ ರೂ ನಷ್ಟು ಬೆಳೆ ನಷ್ಟ ಸಂಭವಿಸಿದೆ.

ಈ ಬಗ್ಗೆ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಲಿದ್ದಾರೆ. ತಂಡದಲ್ಲಿ ಕೃಷಿ ತಜ್ಞ ಅಧಿಕಾರಿಗಳಿದ್ದು, ಬೆಳೆಹಾನಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಿದ್ದಾರೆ ಎಂದರು. ನ. 19 ರಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮರಳು ತುಂಬುವ ಬಗ್ಗೆ ಹೋರಾಟ ನಡೆಸುತ್ತಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು ಅನುಮತಿ ಮೀರಿ ಹೊಳೆಗಿಳಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *