ಪೆಟ್ರೋಲ್-ಡೀಸೆಲ್ ಜಿಎಸ್ ಟಿಗೆ ಒಳಪಡಿಸಿ-ಕರವೇ ಪ್ರತಿಭಟನೆ

ದಾವಣಗೆರೆ; ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್ ಟಿಗೆ ಒಳಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾವೇದಿಕೆ ಕಾರ್ಯಕರ್ತರು ಜಯದೇವವೃತ್ತದಲ್ಲಿಂದು ಪ್ರತಿಭಟನೆ ನಡೆಸಿ ನಂತರ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.


ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರ ಪದೇ ಪದೇ ಪೆಟ್ರೋಲ್, ಡೀಸೆಲ್, ಅನಿಲ ಏರಿಕೆ ಮಾಡುತ್ತಿದೆ. ಆದರೆ ಭಾರತ ಅಭಿವೃದ್ದಿ ಪಥದಲ್ಲಿದೆ ಎಂದು ಭಾವಿಸಿ ಸಾರ್ವಜನಿಕರು ಸಹಿಸಿಕೊಳ್ಳುತ್ತಿದ್ದರು. ನಿತ್ಯದ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಈ ರೀತಿ ಬೆಲೆ ಏರಿಕೆ ಮಾಡುತ್ತಿರುವುದು ಖಂಡನೀಯ. ಕೂಡಲೇ ಪ್ರಧಾನಮಂತ್ರಿಯವರು ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್ ಟಿಗೆ ಒಳಪಡಿಸಲು ರಾಜ್ಯ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿ ಪರಿಹಾರಕ್ಕೆ ಪ್ರಯತ್ನಿಸಬೇಕು.

ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾ ನಿರತರು ಎಚ್ಚರಿಕೆ ನೀಡಿದರು.
ಈ ವೇಳೆ ಆದಾಪುರ ನಾಗರಾಜಪ್ಪ, ಬಿ.ಪರಮೇಶ್ ಮೇಟಿ, ನುದ್ರತ್ ಅನ್ವರ್, ಜೆ.ಸಿ.ವಸುಂಧರ, ಉಮಾತೋಟಪ್ಪ, ರವಿನಾಯ್ಕ್, ರಫೀಕ್, ಸಾಧಿಕ್, ಅಫ್ಜಲ್, ಶಬ್ಬೀರ್ ಅಹ್ಮದ್, ಜಿಲಾನಿ, ಬಸವರಾಜ್ ತಳವಾರ್, ಕುಮಾರ್ ಮತ್ತಿತರರಿದ್ದರು.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *