ಉದ್ಯೋಗಖಾತ್ರಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಒತ್ತಾಯ

ದಾವಣಗೆರೆ; ಉದ್ಯೋಗಖಾತ್ರಿ, ಜಾಬ್ ಕಾರ್ಡ್ ಹೊಂದಿರುವವರಿಗೆ ವಿವಿಧ ಸೌಲಭ್ಯ ಪಡೆಯುವುದಕ್ಕೆ ಸ್ಮಾರ್ಟ್ ಕಾರ್ಡ್ ನೀಡಬೇಕೆಂದು ಒತ್ತಾಯಿಸಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಕಾರ್ಮಿಕರ ಸಂಘ ಜಯದೇವ ವೃತ್ತದಲ್ಲಿಂದು ಪ್ರತಿಭಟನೆ ನಡೆಸಿದರು.


ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾರ್ಮಿಕರು ಸವಲತ್ತು ಪಡೆದುಕೊಳ್ಳುವಂತೆ ರಾಜ್ಯ ಸರ್ಕಾರ ಆದೇಶಿಸಿ ಒಂದು ವರ್ಷ ಆರು ತಿಂಗಳಾದರು ಸಹ ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಯಾವುದೇ ಸವಲತ್ತುಗಳನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ, ಇದಕ್ಕೆ ಉದ್ಯೋಗ ಖಾತ್ರಿ ಜಾಬ್ ಕಾರ್ಡ್ ಹೊಂದಿದವರಿಗೆ ಮೊದಲು ಸ್ಮಾರ್ಟ್ ಕಾರ್ಡ್ ನೀಡದೆ ಖಾಸಗಿ ಏಜೆನ್ಸಿಯವರು ಸಿಬ್ಬಂದಿ ಕೊರತೆಯ ನೆಪದಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದರು.

ಜಿಲ್ಲೆಯಲ್ಲಿ ಇದುವರೆಗೂ ಯಾವ ಉದ್ಯೋಗಖಾತ್ರಿ ಕಾರ್ಮಿಕರಿಗೂ ಸ್ಮಾರ್ಟ್ ಕಾರ್ಡ್ ನೀಡಿಲ್ಲ, ಇದರಿಂದ ಕಾರ್ಮಿಕರಿಗೆ ಅನ್ಯಾಯವಾಗಿದೆ. ಆದ್ದರಿಂದ ಮಂಡಳಿಯಲ್ಲಿ ನೊಂದಾಯಿಸಿಕೊಂಡು ಸವಲತ್ತು ಪಡೆದುಕೊಳ್ಳುವಲ್ಲಿ ಸಾಕಷ್ಟು ಸಮಯ ವಿಳಂಬವಾಗುತ್ತಿದೆ. ಕೂಡಲೇ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗೊಳಪಡುವ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಕೂಡಲೇ ಸ್ಮಾರ್ಟ್ ಕಾರ್ಡ್ ಮಾಡಿಕೊಡಬೇಕು. ಅಥವಾ ಸ್ಮಾರ್ಟ್ ಕಾರ್ಡ್ ಮಾಡಿಕೊಡಲು ವಿಳಂಬವಾದರೆ ನೇರವಾಗಿ ಫಲಾನುಭವಿ ಕಾರ್ಡ್ ಕಾರ್ಮಿಕ ಇಲಾಖೆಯಿಂದ ನೀಡಬೇಕು. ಆ ಮುಖೇನ ಕಾರ್ಮಿಕರು ಮಂಡಳಿಯಿಂದ ಸವಲತ್ತು ಪಡೆಯಲು ಅನುಕೂಲ ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.

ಸ್ಮಾರ್ಟ್ ಕಾರ್ಡ್ ಮಾಡಿಕೊಡಲು ಗುತ್ತಿಗೆ ಪಡೆದಿರುವ ಏಜೆನ್ಸಿಯವರು ತಮ್ಮ ಸಿಬ್ಬಂದಿಯನ್ನು ನೆಚ್ಚಿಸಿಕೊಂಡು ಎಲ್ಲಾ ಗ್ರಾಮಪಂಚಾಯಿತಿಗಳಿಗೆ ತೆರಳಿ ಉದ್ಯೋಗಖಾತ್ರಿ ಕಾರ್ಮಿಕರಿಗೆ ಕೂಡಲೇ ಸ್ಮಾರ್ಟ್ ಕಾರ್ಡ್ ಮಾಡಿಕೊಡುವಂತೆ ಕ್ರಮವಹಿಸಬೇಕು. ಈ ಕಾರ್ಮಿಕ ಜಾಬ್ ಕಾರ್ಡ್ ಗಳಿಗೆ ಡಿಜಿಟಲ್ ನಂಬರ್ ನಮೂದಿಸಿ ಫಲಾನುಭವಿಗಳಿಗೆ ವಿತರಿಸುವಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಸೂಚಿಸಬೇಕು. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳಿಗೆ ಇದರ ಬಗ್ಗೆ ಜಿಲ್ಲಾ ಪಂಚಾಯಿತಿಯಿಂದ ಸಭೆ ನಡೆಸಿ ಮಾಹಿತಿ ನೀಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡ ಹೆಚ್.ಕೆ.ರಾಮಚಂದ್ರಪ್ಪ, ಸಂಘದ ಅಧ್ಯಕ್ಷ ಆವರಗೆರೆ ಚಂದ್ರು, ಪ್ರಧಾನ ಕಾರ್ಯದರ್ಶಿ ರಂಗನಾಥ್ ಹುಣಸೆಕಟ್ಟೆ, ಸಹ ಕಾರ್ಯದರ್ಶಿ ರೇಣುಕಮ್ಮ, ಆವರಗೆರೆ ವಾಸು, ನಳಿನಾಕ್ಷಿ, ಮಂಜಮ್ಮ, ನಾಗವೇಣಿ, ಗುರುಶಾಂತಮ್ಮ, ರಾಧ, ಸುಧಾ, ಪ್ರೇಮಾಲೀಲಾ, ಲೀಲಾವತಿ ಸೇರಿದಂತೆ ಮತ್ತಿತರರಿದ್ದರು.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *