ಭೂಮಿ-ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ಪ್ರತಿಭಟನೆ

ದಾವಣಗೆರೆ;ಜಿಲ್ಲೆಯ ಭೂಮಿ ಮತ್ತು ವಸತಿ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರಿ ಆದೇಶಗಳ ಉನ್ನತ ಮಟ್ಟದದ ಸಮಿತಿ ತೀರ್ಮಾನಗಳ ಜಾರಿಗೆ ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿಂದು ಪ್ರತಿಭಟನೆ ನಡೆಸಿದರು.

ಜಿಲ್ಲೆಯಲ್ಲಿ ಸಾಗುವಳಿ ಮಾಡದೆ ಇರುವ ಸರ್ಕಾರಿ, ಇನಾಮ್, ಖಾರೀಜ್ ಖಾತ, ಗೋಮಾಳ, ಅಮೃತಮಹಲ್ ಕಾವಲ್ ಭೂಮಿಗಳ ಸರ್ವೆ ನಡೆಸಬೇಕು. ಭೂಮಿಹೀನರು ಸಾಗುವಳಿ ಮಾಡುತ್ತಿದ್ದರೆ ಅವರುಗಳಿಗೆ ಆ ಭೂಮಿಯನ್ನು ಮಂಜೂರು ಮಾಡಬೇಕು. ಅರಣ್ಯ- ಕಂದಾಯ ಭೂಮಿಗಳಲ್ಲಿ ಸಾಗುವಳಿ ಮಾಡುತ್ತಿರುವ ಭೂಹೀನ ರೈತರುಗಳಿಗೆ ಅರಣ್ಯ ಹಕ್ಕು ಕಾಯ್ದೆ ಪ್ರಕಾರ ಭೂಮಿ ಮಂಜೂರು ಮಾಡಲು ಅರಣ್ಯ ಹಕ್ಕು ಸಮಿತಿ ರಚಿಸಬೇಕು. ಭೂಮಿ ಹಕ್ಕು ಪತ್ರಗಳನ್ನು ವಿತರಿಸಬೇಕು.

ಪಹಣಿ, ಸರ್ವೆ, ಚೆಕ್ ಬಂದಿ, ನಕ್ಷೆ, ಭೂಮಿಯ ವಿಭಾಗೀಕರಣಗಳಿಗಾಗಿ ರೈತರನ್ನು ಸಂಬಂಧಪಟ್ಟ ಅಧಿಕಾರಿಗಳು, ತಿಂಗಳು ವರ್ಷಗಟ್ಟಲೆ ಅಲೆದಾಡಿಸುತ್ತಿದ್ದಾರೆ. ಈ ಕೂಡಲೇ ಇದನ್ನು ನಿಲ್ಲಿಸಬೇಕು. ರಾಜ್ಯದ ಬಡ ಜನರ ಭೂಮಿ ಮತ್ತು ವಸತಿ ಸಮಸ್ಯೆಗಳನ್ನು ಬಗೆಹರಿಸಲು ಕಳೆದ ಎರಡುವರೆ ವರ್ಷಗಳಿಂದ ವಿವಿಧ ಸಂಘಟನೆಗಳು, ಸಮಿತಿಯ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಸಮಸ್ಯೆ ಬಗೆಹರಿದಿಲ್ಲ, ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದರು. ಮೌಲಾನಾಯ್ಕ, ಸತೀಶ್ ಅರವಿಂದ್ ನೇತೃತ್ವದಲ್ಲಿ ಅನೇಕ ಮುಖಂಡರು ಇದ್ದರು.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *