ಪ್ರತಿಜಿಲ್ಲೆಯಲ್ಲಿ ಕ್ರೀಡಾನಿಲಯ ನಿರ್ಮಿಸಿ: ಸರ್ಕಾರಕ್ಕೆ ಮನವಿ

ದಾವಣಗೆರೆ -ಪ್ರತಿ ಜಿಲ್ಲೆಯಲ್ಲಿ ಮಹಿಳೆಯರಿಗೆ ಮತ್ತು ಪುರುಷರಿಗೆ ಕ್ರೀಡಾ ನಿಲಯ ನಿರ್ಮಾಣವಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಮಾಜಿ ಶಾಸಕ ಕೆ.ಮಲ್ಲಪ್ಪ ಹೇಳಿದರು.


ನಗರದ ಆಂಜನೇಯ ಬಡಾವಣೆಯಲ್ಲಿರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿಂದು ಎಜಿಬಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ ವಿಶ್ವವಿದ್ಯಾನಿಲಯ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ದಾವಣಗೆರೆ ವಿವಿ ಅಂತರ್ ಕಾಲೇಜು ಕುಸ್ತಿ ಮತ್ತು ಜುಡೋ ಪಂದ್ಯಾವಳಿ ಹಾಗೂ ಆಯ್ಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕುಸ್ತಿ ಪ್ರಾಚೀನ ಕಲೆ. ಕ್ರೀಡಾಪಟುಗಳಿಗೆ ಒಳ್ಳೆಯ ನಡತೆ ಬಹುಮುಖ್ಯ. ವಿದ್ಯಾರ್ಥಿಗಳು ಉನ್ನತಮಟ್ಟದ ವ್ಯಾಸಂಗದ ಜೊತೆಗೆ ಆದರ್ಶ ವ್ಯಕ್ತಿಗಳಾಗಿ ಹೊರಹೊಮ್ಮಬೇಕು, ತೀರ್ಪುಗಾರರು ಪ್ರಾಮಾಣಿಕವಾಗಿ ತೀರ್ಪನ್ನು ನೀಡಬೇಕೆಂದು ಹೇಳಿದರು.

ಪಾಲಿಕೆ ಸದಸ್ಯ ದಿನೇಶ್ ಕೆ ಶೆಟ್ಟಿ ಮಾತನಾಡಿ, ಕ್ರೀಡಾಪಟುಗಳಿಗೆ ಸರ್ಕಾರದಿಂದ ಉದ್ಯೋಗ ಕೊಡಿಸುವ ಕೆಲಸವಾಗಬೇಕೆಂದು ಆಗ್ರಹಿಸಿದರು. ಇತ್ತೀಚಿಗೆ ದಾವಣಗೆರೆ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಕ್ರೀಡಾಪಟುಗಳು ಒಳ್ಳೆಯ ಹೆಸರು ಮಾಡುತ್ತಿದ್ದಾರೆ. ಇದರಿಂದ ತರಬೇತುದಾರರ ಶ್ರಮವು ಸಹ ಅಷ್ಟೇ ಮುಖ್ಯವಾಗಿದೆ. ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಕೆಲಸವಾಗಬೇಕಾಗಿದೆ. ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿ ಜಿಲ್ಲೆಗೆ, ರಾಜ್ಯಕ್ಕೆ ಒಳ್ಳೆಯ ಹೆಸರು ತನ್ನಿ. ಕಂಪನಿಗಳು ಕ್ರೀಡಾಪಟುಗಳಿಗೆ ಉದ್ಯೋಗ ನೀಡುವಲ್ಲಿ ಮುಂದೆ ಬರಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಮೇಯರ್ ಶೋಭಾಪಲ್ಲಾಗಟ್ಟೆ, ಎಸ್ ಕೆ ಪಿ ವಿದ್ಯಾಪೀಠದ ಪ್ರಭಾರ ಅಧ್ಯಕ್ಷ ಕೆ.ಜಿ.ಸತ್ಯನಾರಾಯಣಶೆಟ್ಟಿ, ಅನಂತರಾಮ್ ಶೆಟ್ಟಿ ಕೆ.ಎನ್, ಆರ್.ಎಲ್.ಪ್ರಭಾಕರ್, ದಾನಪ್ಪ, ಮಂಜಪ್ಪ, ವಿನೋದ್, ಅಂಜನ್, ಗೋವಿಂದರಾಜ್ ಶೆಟ್ಟಿ, ಶಿವಾನಂದ, ಎಸ್.ಎಂ.ರಾಜಕುಮಾರ್ ಸೇರಿದಂತೆ ಮತ್ತಿತರರಿದ್ದರು.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *