Home / ಸುದ್ದಿ / ಜಿಲ್ಲೆ / ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ವಿ.ಸೋಮಣ್ಣನ ಮಗ ಸ್ಪರ್ಧೆಗೆ…!! ಅಸ್ತು ಅಂದ್ರು ಬಿಎಸ್ವೈ

ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ವಿ.ಸೋಮಣ್ಣನ ಮಗ ಸ್ಪರ್ಧೆಗೆ…!! ಅಸ್ತು ಅಂದ್ರು ಬಿಎಸ್ವೈ

ಹಾಸನ ಜಿಲ್ಲೆ ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಮುಖಂಡ ವಿ.ಸೋಮಣ್ಣನ ಪುತ್ರ ಡಾ.ಅರುಣ್ ಸೋಮಣ್ಣ ಭಾರತೀಯ ಜನತಾ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕನ್ಫರ್ಮ್ ಮಾಡಿದ್ದಾರಂತೆ.

ಡಾ.ಅರುಣ್ ಸೋಮಣ್ಣ ಅವರನ್ನ ಬೆಂಗಳೂರು ಅಥವಾ ಚಾಮರಾಜನಗರದಲ್ಲಿ ಚುನಾವಣೆಗೆ ನಿಲ್ಲಿಸುವ ಇರಾದೆ ವಿ.ಸೋಮಣ್ಣ ಅವರಿಗಿತ್ತು. ಆದರೆ, ಬಿ.ಎಸ್.ಯಡಿಯೂರಪ್ಪ ಡಾ.ಅರುಣ್ ಸೋಮಣ್ಣ ಅವರನ್ನ ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಥಿಸುವಂತೆ ಸೂಚಿಸಿದ್ದಾರಂತೆ.

ಅದೇ ಕಾರಣಕ್ಕೆ ವಿ.ಸೋಮಣ್ಣ ಅರಸೀಕೆರೆಯ ಜೇನುಕಲ್ಲು ಸಿದ್ಧೇಶ್ವರ ಸನ್ನಿಧಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ರು. ಸಿದ್ದೇಶ್ವರನ ಅನುಗ್ರಹ ಮಗನ ಮೇಲೆ ಇರಲಿ, ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲಿ ಅಂತ ಬೇಡಿಕೊಂಡ್ರು….

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *