ಕರಾಮುವಿ : ವಿಶ್ವವಿದ್ಯಾನಿಲಯದ ಶೈಕ್ಷಣಿಕ ಕಟ್ಟಡಗಳ ಉದ್ಘಾಟನೆ

ದಾವಣಗೆರೆ ; ಡಿ.01 ರಂದು ಬೆಳಿಗ್ಗೆ 11 ಗಂಟೆಗೆ ಘಟಿಕೋತ್ಸವ ಭವನ, ಕರಾಮುವಿ ಕೇಂದ್ರ ಕಚೇರಿ ಆವರಣ, ಮೈಸೂರು ಇಲ್ಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳನ್ನು ವಿಸ್ತರಿಸಲು ಘಟಿಕೋತ್ಸವ ಭವನ, ಶೈಕ್ಷಣ ಕ ಭವನ ಹಾಗೂ ಪ್ರಾದೇಶಿಕ ಕೇಂದ್ರಗಳ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದೆ.


ಘನತೆವೆತ್ತ ರಾಜ್ಯಪಾಲರು ಹಾಗೂ ಕರಾಮುವಿ ಯ ಕುಲಾಧಿಪತಿಗಳಾದ ವಜುಭಾಯಿ ರೂಢಾಬಾಯಿ ವಾಲಾ ಇವರು ಘಟಿಕೋತ್ಸವ ಭವನ ಮತ್ತು ಶೈಕ್ಷಣ ಕ ಭವನದ ಉದ್ಘಾಟನೆಯನ್ನು ನೆರವೇರಿಸುವರು. ಉನ್ನತ ಶಿಕ್ಷಣ ಸಚಿವರು ಹಾಗೂ ಸಹ ಕುಲಾಧಿಪತಿಗಳಾದ ಜಿ.ಟಿ.ದೇವೇಗೌಡ ಇವರು ಪ್ರಾದೇಶಿಕ ಕೇಂದ್ರ ಕಟ್ಟಡಗಳ ಉದ್ಘಾಟನೆಗಳನ್ನು ನೆರೆವೇರಿಸಲಿದ್ದಾರೆ. ಕರಾಮುವಿ ಕುಲಪತಿಗಳಾದ ಪ್ರೊ.ಡಿ.ಶಿವಲಿಂಗಯ್ಯ ಅಧ್ಯಕ್ಷತೆಯನ್ನು ವಹಿಸುವರು.


ಗೌರವಾನ್ವಿತ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರು ಮತ್ತು ಕರಾಮುವಿ ವ್ಯವಸ್ಥಾಪಕ ಮಂಡಳಿಯ ಸದಸ್ಯರುಗಳಾದ ಸಂದೇಶ್ ನಾಗರಾಜ್ ಮತ್ತು ಪುಟ್ಟಣ್ಣ ಹಾಗೂ ಮೈಸೂರು ಚಾಮರಾಜ ಕ್ಷೇತ್ರದ ವಿಧಾನ ಸಭಾ ಸದಸ್ಯರಾದ ಎಲ್ ನಾಗೇಂದ್ರ ಪಾಲ್ಗೊಳ್ಳುವರು.
ಈ ಕಾರ್ಯಕ್ರಮಕ್ಕೆ ಪ್ರಾದೇಶಿಕ ಕೇಂದ್ರದ ವ್ಯಾಪ್ತಿಯಲ್ಲಿ ಪ್ರವೇಶಾತಿ ಹೊಂದಿದ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ಹಾಜರಿರುವಂತೆ ಹಾಗೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಶ್ವವಿದ್ಯಾನಿಲಯದಿಂದ ನೀಡಿರುವ ಗುರುತಿನ ಚೀಟಿಯನ್ನು ತರಬೇಕೆಂದು ಪ್ರಕಟಣೆ ತಿಳಿಸಿದೆ.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *