ಪೊಲೀಸ್ ಠಾಣೆ ಎದುರೇ ಯುವಕನ ಬರ್ಬರ ಹತ್ಯೆ

ದಾವಣಗೆರೆ;ಹಾಡಹಗಲೇ ಚಾಕುವಿನಿಂದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಡಾವಣೆ ಪೊಲೀಸ್ ಠಾಣೆ ಎದುರಿನಲ್ಲಿರುವ ಹೈಸ್ಕೂಲ್ ಮೈದಾನದಲ್ಲಿ ಇಂದು ಬೆಳಗ್ಗೆ 10 ಗಂಟೆ ವೇಳೆಯಲ್ಲಿ ನಡೆದಿದೆ. ಎಸ್.ಎಂ. ಕೃಷ್ಣನಗರದ ನಿವಾಸಿ ಬಸವರಾಜ್ (24) ಕೊಲೆಯಾದ ಯುವಕ. 2 ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಯುವಕ ಹೊಟ್ಟೆಗೆ ಇರಿಯಲಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಮೃತ ಬಸವರಾಜ್ ಐಟಿಐ ಮುಗಿಸಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ಎರಡು ದಿನಗಳ ಹಿಂದೆ ವಿಕಾಸ್ ಮತ್ತು ಅಜಯ್ ಎಂಬುವರ ನಡುವೆ ಗಲಾಟೆ ನಡೆದಿತ್ತು. ವಿಕಾಸ ತನ್ನ ಸ್ನೇಹಿತ ಬಸವರಾಜನನ್ನು ಹೈಸ್ಕೂಲ್ ಮೈದಾನಕ್ಕೆ ಕರೆಯಿಸಿಕೊಂಡು ಮಾತಿನಚಕಮಕಿ ನಡೆಸಿ ಹೊಡೆದಾಡಿಕೊಂಡಿದ್ದಾರೆ. ವಿಕಾಸನ ಸ್ನೇಹಿತರು ಬಸವರಾಜ್ ಗೆ ಚಾಕುವಿನಿಂದ ಇರಿದಿದ್ದಾರೆ ನಂತರ ಆತನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋದರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಬಡಾವಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *